ವರದಿ ರಾಣಿ ಪ್ರಸನ್ನ
ಹೆತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ ಭಾಗವಹಿಸಿದರು.
ಕಾಲೇಜಿನ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದು, ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಶಾಸಕರು ಈ ಸಂದರ್ಭದಲ್ಲಿ ಚರ್ಚಿಸಿದರು..
ಸಕಲೇಶಪುರ ತಾಲೂಕಿನ ಹೆತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳ ಉದ್ಘಾಟನಾ ಸಮಾರಂಭ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮವಾಗಿತ್ತು
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
