ಸಕಲೇಶಪುರ ತಾಲೂಕು ಯಸಳೂರು ಹೋಬಳಿ ಮರಡಿಕೆರೆ ಗ್ರಾಮದ ಪ್ರಿಯ ಎಂಬವರ ಮನೆಯನ್ನು ದಿನಾಂಕ 4/7/2025 ರಂದು ಯಸಳೂರು ವಲಯ ಅರಣ್ಯ ಅಧಿಕಾರಿ ಕೃಷ್ಣ ಮತ್ತು ಸಿಬ್ಬಂದಿಗಳೊಂದಿಗೆ ಜೆಸಿಬಿ ಮುಖಾಂತರ ಮನೆಯನ್ನು ನೆಲಸಮ ಮಾಡಲಾಗಿದೆ.
ಎರಡು ತಿಂಗಳ ಬಾಣಂತಿ ಇರುವ ಕುಟುಂಬ ಮನೆ ಕಳೆದುಕೊಂಡಿರುತ್ತದೆ.
ಕುಟುಂಬಕ್ಕೆ ನ್ಯಾಯ ಕೊಡಿಸುವ ಸಲುವಾಗಿ ಸಕಲೇಶಪುರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಒಕ್ಕೂಟ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಮ್ಮುಖದಲ್ಲಿ ಇಂದು ಗುರುವಾರ ಬೆಳಿಗ್ಗೆ 10:00 ಗಂಟೆಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಮೆರವಣಿಗೆ ಮಾಡಿದ್ದಾರೆ.
ಪ್ರತಿಭಟನೆ ನಡೆಸಿ ಮನೆದ್ವಂಸ ಮಾಡಿದ ಯಸಳೂರು ವಲಯ ಅರಣ್ಯ ಅಧಿಕಾರಿ ಕೃಷ್ಣ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಮನವಿ ಸಲ್ಲಿಸಿದರು.
ಜುಲೈ 10 ರಂದು ಸಹ ಯುವ ಕಾಂಗ್ರೆಸ್ ಪ್ರತಿಭಟನೆ ಮಾಡಿ ಅಂದು ಕೂಡ ಮನವಿ ಸಲ್ಲಿಸಿದ್ದರು ಆದರೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂದು ಮತ್ತೆ ಬೃಹತ್ ಪ್ರತಿಭಟನೆ ಮಾಡಲಾಗಿದೆ.
