ಆಲೂರು:ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಹೃದಯಘಾತದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ವಾಕ್ ಮ್ಯಾರಾಥಾನ್ ಮೂಲಕ ಜಾಗೃತಿ ಮೂಡಿಸಿದರು.
ಜಾಥವನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ” ನಿಸಾರ್ ಫಾತೀಮಾ ಅವರು ಮಾತನಾಡಿ ಯುವ ಜನರಲ್ಲಿ ಹೃದಯಾಘಾತ ತಡೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅರೋಗ್ಯ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಯುವ ಜನರಲ್ಲಿ ಹೆಚ್ಚುತ್ತಿರುವ ದುಶ್ಚಟಗಳು, ಅಸಮತೊಲನದ ಅಹಾರ ಸೇವನೆ, ಜೀವನ ಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ. ಹೃದಯಾಘಾತ ತಡೆಗೆ ಅರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಮಾಡಲು ಸಿದ್ಧತೆ ನಡೆಸಲಾಗಿದೆ. ಅರೋಗ್ಯ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಶಾಲೆ ಕಾಲೇಜುಗಳಲ್ಲಿ ಕೂಡ ಹೃದಯ ಅರೋಗ್ಯದ ತಪಾಸಣೆ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ,ಹೃದಯಾಘಾತಗಳ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಬದಲಾಗಿ ನಿಯಮಿತವಾಗಿ ಅರೋಗ್ಯ ತಪಾಸಣೆ, ಉತ್ತಮ ಅರೋಗ್ಯ ಶೈಲಿ ರೂಪಿಸಿಕೊಂಡು ಅರೋಗ್ಯವಾಗಿರಲು ಯತ್ನಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಸಿಡಿಪಿಓ ಏ.ಟಿ ಮಲ್ಲೇಶ್.ಕ್ಷೇತ್ರ ಶಿಕ್ಷಾಧಿಕಾರಿ ಕೃಷ್ಣೇಗೌಡ,ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಮ್ಯಾರಾಥಾನ್ ಸಿಬ್ಬಂದಿಗಳು ಭಾಹವಹಿಸಿದ್ದರು.
