ವರದಿ ರಾಣಿ ಪ್ರಸನ್ನ
ಆಲೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಲಾಯಿತು.
ಅಂಗನವಾಡಿಗಳ ಕಾರುಕರ್ತೆಯರ ಹಾಗು ಅಂಗನವಾಡಿಗೆ ಬೇಕಾದ ಕುಂದು ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.
ಅಂಗನವಾಡಿಗಳಲ್ಲಿ ಕುಡಿಯುವ ನೀರು, ಪೌಷ್ಟಿಕ ಆಹಾರ ಒದಗಿಸುವ ಕುರಿತು, ಕಟ್ಟಡ, ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಉಪಸ್ಥಿತರಿದ್ದರು.
