ಸಂಸದರಾದಂತಹ ಶ್ರೇಯಸ್ ಎಂ ಪಟೇಲ್ ರವರು ಸಕಲೇಶಪುರ ತಾಲ್ಲೂಕಿಗೆ ಆಗಮಿಸಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿಯಿಂದ ದೋಣಿಗಾಲ್ ವರೆಗೆ ರಸ್ತೆ ಪರಿಸ್ಥಿತಿ ವೀಕ್ಷಿಸಲಾಯಿತು.
ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ಕುಂಠಿತವಾಗುತ್ತಿದೆ. ರಾಜಧಾನಿ ಬೆಂಗಳೂರಿನಿಂದ ಬಂದರು ನಾಡು ಮಂಗಳೂರಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದೆ.
ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಧಾರಾಕಾರ ಮಳೆಯಿಂದ ಕಾಮಗಾರಿ ನಿಧಾನವಾಗುತ್ತಿದೆ.
ಈ ವರ್ಷದ ಜೂನ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ ಮಳೆ ಬಿಡುವು ನೀಡದೆ ಇರುವುದರಿಂದ ಅಡಚಣೆಯಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಸ್ತೆಯ ಎರಡೂ ಬದಿಗೆ ತಡೆಗೋಡೆ ನಿರ್ಮಾಣದ ಮೂಲಕ ಸಂಭವನೀಯ ಅವಘಡ ತಪ್ಪಿಸಲಾಗುವುದು. ಪಾರದರ್ಶಕ ಹಾಗೂ ತ್ವರಿತಗತಿಯಲ್ಲಿ ಕೆಲಸ ಮುಗಿಸಲು ಮುತುವರ್ಜಿ ವಹಿಸಲಾಗುವುದು. ಎಂದು ತಿಳಿಸಿದರು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು




