ಸಕಲೇಶಪುರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಮುದಾಯ ಮತ್ತು ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರ ಕುಂದು ಕೊರತೆಗಳ ಸಭೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ವಿವಿಧ ಬೇಡಿಕೆಗಳ ಕುರಿತು ಮನವಿ ಸ್ವೀಕರಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.ಇದೆ ವೇಳೆ ಆಶಾ ಕಾರ್ಯಕರ್ತೆ ಯರ ಮೂಲಕ ಸುಮಾರು 56 ವಿವಿಧ ಬಗೆಯ ಚಟುವಟಿಕೆಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿರುವ ಕುರಿತಂತೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳು, ಇನ್ನಿತರ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

