ಸಕಲೇಶಪುರ ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕಾಂ) ಕಛೇರಿಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರ ಅಧ್ಯಕ್ಷತೆಯಲ್ಲಿ ಆಲೂರು ಮತ್ತು ಸಕಲೇಶಪುರ ತಾಲೂಕುಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.



– ಮಲೆನಾಡು ಭಾಗದಲ್ಲಿ ಮಳೆ ಗಾಳಿ ಹೆಚ್ಚಾಗಿರುವ ಹಿನ್ನೆಲೆ ವಿದ್ಯುತ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸದಾ ಸನ್ನದ್ಧರಾಗಿಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು.
– ಅರಣ್ಯ ಇಲಾಖೆ ಮತ್ತು ವಿದ್ಯುತ್ ಇಲಾಖೆ ಸಮನ್ವಯ ಸಾಧಿಸಿಕೊಂಡು ರಸ್ತೆಗೆ ಬಾಗಿರುವ ರೆಂಬೆ ಕೊಂಬೆಗಳನ್ನು ತೆರವು ಮಾಡಿ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ವಿದ್ಯುತ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
