ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ರೈತರಿಗೆ ಹಂಚಿಕೆ ಮಾಡದ ರೈತವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಾಸನ ನಗರದ ಕೃಷಿ ಜಂಟಿ ನಿರ್ದೇಶಕರ ಕಚೇರಿ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ರೈತರಿಗೆ ಅನ್ಯಾಯವೆಸಗುತ್ತಿರುವ ರಾಜ್ಯ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿದರು.
ಈ ಪ್ರತಿಭಟನೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಕೆ ಸುರೇಶ್ ಭಾಗವಹಿಸಿ ಕೇಂದ್ರ ಕೊಟ್ಟರೂ ರಾಜ್ಯ ಮಾಡುತ್ತಿರುವ ತಾರತಮ್ಯವನ್ನು ಎಲ್ಲರೂ ವಿರೋಧಿಸಬೇಕು ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ರೈತ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರುಗಳು, ಇನ್ನಿತರ ಮುಖಂಡರು, ರೈತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




