ಸಕಲೇಶಪುರ ತಾಲೂಕು ಯಸಳೂರು ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನಾಯಕರಲ್ಲಿ ಪ್ರಮುಖರು, ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಬಿ ಶಿವಪ್ಪ ರವರ 8ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಬಿ.ಬಿ ಶಿವಪ್ಪಾಜಿ ಅವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷ ಸಂಘಟನೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದರು.
ಪಕ್ಷಕ್ಕಾಗಿ ಹಗಲಿರುಳೆನ್ನದೆ ಶ್ರಮಿಸಿದ ಶ್ರೀಯುತರು ಎಲ್ಲಾ ಕಾರ್ಯಕರ್ತರಿಗೂ ಪ್ರೇರಣೆ ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿ.ಬಿ ಶಿವಪ್ಪಾಜಿ ಅವರ ಕುಟುಂಬ ಸದಸ್ಯರು, ಮಾಜಿ ಸಭಾಪತಿಗಳಾದ ಕೆ.ಜೆ ಬೋಪಯ್ಯ ರವರು, ಮಾಜಿ ಶಾಸಕರುಗಳು ಇನ್ನಿತರ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
