ಹೆತ್ತೂರು ಹೋಬಳಿ ಬೆಳೆಗಾರರ ಸಂಘದಿಂದ ಯಸಳೂರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಲಾಯಿತು.
ಹೆಚ್ಚುತ್ತಿರುವ ಕಾಡು ಪ್ರಾಣಿಗಳ ಉಪಟಳವನ್ನು ನಿಯಂತ್ರಣಕ್ಕೆ ತರಬೇಕು ಎಂದು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದೇವರಾಜ್ ರವರು ಮನವಿ ಮಾಡಿದರು.
ಆನೆ ಮತ್ತು ಕಾಟಿಗಳ ಉಪಟಳದಿಂದ ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಇದನ್ನು ನಿಯಂತ್ರಣ ಮಾಡಿ ರೈತರ ಸಮಸ್ಯೆಗೆ ಸ್ಪಂದನೆ ಮಾಡುವಂತೆ ಮನವಿ ಮಾಡಲಾಯಿತು.
ಆನೆಯಿಂದ ಆದ ಕೃಷಿ ನಷ್ಟದ ಪರಿಹಾರವನ್ನು ಸಮಯಕ್ಕೆ ಸರಿಯಾಗಿ ತಲುಪಬೇಕೆಂದು ಕೇಳಿಕೊಂಡಿದ್ದಾರೆ ,
ಅರಣ್ಯ ಇಲಾಖೆ ಅಧಿಕಾರಿಗಳು ಮಾತನಾಡಿ ಎಂದಿಗೂ ನಾವು ರೈತರ ಪರವಾಗಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ನಿಯೋಗದಲ್ಲಿ ಹೆತ್ತೂರು ಬೆಳೆಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
