ಸಕಲೇಶಪುರದ ಮೂರ್ಕಣ್ಣುಗುಡ್ಡ ಅಧಿಸೂಚಿತ ಸೆಕ್ಷನ್ 4 ಅರಣ್ಯ ಪ್ರದೇಶವೆಂದು ಭಾಧಿತರಾದ ಕಾಡುಮನೆ, ಕ್ಯಾಮನಹಳ್ಳಿ, ಜಂಬರಡಿ, ಅಚ್ಚನಹಳ್ಳಿ, ಅಗನಿ, ನಡಹಳ್ಳಿ, ಮಕ್ಕಿಹಳ್ಳಿ, ಮಾದಾನಪುರ ಗ್ರಾಮಸ್ಥರುಗಳಿಗೆ ಅರಣ್ಯ ಇಲಾಖೆಯಿಂದ ನೋಟಿಸ್ ಗಳನ್ನು ನೀಡುವ ಮೂಲಕ ಒಕ್ಕಲೆಬ್ಬಿಸುವ ಹುನ್ನಾರದ ವಿರುದ್ಧ ಶಾಸಕ ಸಿಮೆಂಟ್ ಮಂಜುನಾಥ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇಂದು ಅಲ್ಲಿನ ಗ್ರಾಮಸ್ಥರು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಬಗ್ಗೆ ಮನವಿ ಸಲ್ಲಿಸಿದರು.
ಶಾಸಕರು ಈ ಸಮಸ್ಯೆಯ ಕುರಿತು ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಮತ್ತು ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸಲಾಗುವುದು ಎಂದು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

