ಸಕಲೇಶಪುರ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ರಸ್ತೆ ಬದಿಯಲ್ಲಿನ ಬೃಹತ್ ಬಂಡೆಯನ್ನು ತೆರವುಗೊಳಿಸಲಾಗಿದೆ.
ಈ ಬಂಡೆಯಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಈ ಬಗ್ಗೆ ಮಲೆನಾಡು ರಕ್ಷಣಾ ಸೇನೆಯ ರಾಜ್ಯ ಅಧ್ಯಕ್ಷರಾದ ಡಾ. ಸಾಗರ್ ಜಾನೇ ಕೆರೆಯವರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಧ್ವನಿ ಎತ್ತಿದ್ದರು.
ಈ ಸಮಸ್ಯೆ ಮನಗಂಡ ರಾಷ್ಟೀಯ ಹೆದ್ದಾರಿ ಅಧಿಕಾರಿಗಳು ಈ ಬಂಡೆಯನ್ನು ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.


