ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಕಲೇಶಪುರ ನಗರ ಠಾಣೆಯಿಂದ ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಡಿ ಎಸ್ಪಿ ಪ್ರಮೋದ್ ಕುಮಾರ್, ನಗರ ಠಾಣೆ ಇನ್ಸ್ಪೆಕ್ಟರ್ ಜಗದೀಶ್, ಸಬ್ ಇನ್ಸ್ಪೆಕ್ಟರ್ ಗಳಾದ ಮಹೇಶ್ ಹಾಗೂ ಕೃಷ್ಣಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ಶಾಂತಿ ಸಭೆಗೆ ಸಕಲೇಶಪುರ ನಗರ ಠಾಣಾ ವ್ಯಾಪ್ತಿಯ ಎಲ್ಲಾ ಗಣಪತಿ ಪ್ರತಿಷ್ಠಾಪನೆ ಮಾಡುವ ಮಂಡಳಿಯ ಅಧ್ಯಕ್ಷರು ಮತ್ತು ಮಸೀದಿ ಕಮಿಟಿಯ ಅಧ್ಯಕ್ಷರು ದಿನಾಂಕ 11.08.2025 ರಂದು ಬೆಳಿಗ್ಗೆ 11 ಗಂಟೆಗೆ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆಗೆ ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ