ಪ್ರಧಾನಿ ಶ್ರೀ ನರೇಂದ್ರ ಮೋದಿಯವರ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ ಇಂದು ಸಕಲೇಶಪುರ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಬೈಕ್ ರ್ಯಾಲಿ ಮತ್ತು ಮಹಿಳಾ ಮೋರ್ಚಾ ವತಿಯಿಂದ ವೀರ ಯೋಧ ಎ.ಕೆ ಸಾಗರ್ ಅವರ ಪ್ರತಿಮೆ ಸ್ವಚ್ಛತೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಮಂಜುನಾಥ್ ರವರು ಭಾಗವಹಿಸಿದರು.
ಹಲವಾರು ಮಂದಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಮಹಿಳಾ ಮೋರ್ಚಾ ಕಾರ್ಯಕರ್ತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.



