


ನ್ಯಾಯಾಧೀಶರಿಂದ ಧ್ವಜಾರೋಹಣ
ಸಕಲೇಶಪುರ:- ಇಲ್ಲಿನ ಜೆ.ಎಂ.ಎಫ್.ಸಿ.ನ್ಯಾಯಾಲಯದ ಆವರಣದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಇಂದು ಬೆಳಗ್ಗೆ 8 ಗಂಟೆಗೆ ಸರಿಯಾಗಿ ಸಕಲೇಶಪುರದ ಜೆ. ಎಂ. ಎಫ್. ಸಿ. ನ್ಯಾಯಾಲಯದ ಆವರಣದಲ್ಲಿ ನಗರದ ಪೊಲೀಸರ ಕವಾಯಿತು ಮತ್ತು ಪಥಸಂಚಲನದ ಗೌರವ ವಂದನೆ ಸ್ವೀಕರಿಸುವುದರೊಂದಿಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಮತ್ತು ಕಿರಿಯ ಶ್ರೇಣಿ ನ್ಯಾಯಾಧೀಶರಾದ ಲಕ್ಷ್ಮೀನರಸಿಂಹ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳು ಈ ಕಾರ್ಯಕ್ರಮದಲ್ಲಿ ಪಥಸಂಚಲನ ನಡೆಸಿದ ಪೊಲೀಸ್ ಇಲಾಖೆ, ನ್ಯಾಯಾಂಗ ಇಲಾಖೆ ಮತ್ತು ವಕೀಲರುಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಹೇಳಿದರು.
