ಆಲೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಲೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಅಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ದೇಶದ ಸಾಮರ್ಥ್ಯಕ್ಕೆ ಕೈಗನ್ನಡಿಯಾಗಿದೆ. ದೇಶದ ಯುವಕರು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಸನ್ಮಾನ
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
