ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆ.ಪಿ.ಸಿ.ಸಿ ಯ ಆದೇಶದಂತೆ ಮಾರ್ಗದರ್ಶನದಂತೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಸಕಲೇಶಪುರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನ ಕಾರ್ಯಕ್ರಮ ಮಾಡಲಾಯಿತು.
ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದಂತಹ ಮುರಳಿ ಮೋಹನ್ ರವರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು ಸದಸ್ಯರುಗಳು ಸರ್ಕಾರದ ನಮ್ಮ ಪಕ್ಷದ ಎಲ್ಲಾ ನಾಮ ನಿರ್ದೇಶಕ ಸದಸ್ಯರುಗಳು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರುಗಳು ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಮಾಡಿ ಮೋಸದ ಜಯಸಾಧಿಸಿ ಸಂವಿಧಾನ ವಿರೋಧಿ ಚಟುವಟಿಕೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷ ವಾಕ್ಯವನ್ನು ಕೋಗುತ್ತಾ ಪಟ್ಟಣದ ಮುಖ್ಯಬೀದಿಯಲ್ಲಿ ಸಾಗುತ್ತಾ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯವರೆಗೂ ಜನಸಾಮಾನ್ಯರಿಗೆ ಜನ ಜಾಗೃತಿ ಮೂಡಿಸುತ್ತಾ ಪತಸಂಚಲನ ಕಾರ್ಯಕ್ರಮವನ್ನು ಮಾಡಿ ಯಶಸ್ವಿಗೊಳಿಸಲಾಯಿತು
