ಸಾಮಾಜಿಕ ಜೀವನದಲ್ಲಿ ಆರೋಗ್ಯಕರ ಸನ್ನಿವೇಶ ಬಹಳ ಮುಖ್ಯ.: ಕೆ.ಎಸ್ ಪ್ರಕಾಶ್
ಕುನಿಗನಹಳ್ಳಿ.: ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರೂ ಸಹ ಆರೋಗ್ಯವಂತರಾಗಿದ್ದರೆ ಮಾತ್ರ ,ಪ್ರತಿಯೊಂದು ಹಳ್ಳಿ, ಊರು, ಗ್ರಾಮ, ನಾಡು, ದೇಶ ಎಲ್ಲವೂ ಸಹ ಸುಭಿಕ್ಷವಾಗಿ ಕಾಲ ಕಳೆಯಲು ಸಾಧ್ಯ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆ.ಎಸ್ ಪ್ರಕಾಶ್ ರವರು ನುಡಿದರು
ಸ್ವಾತಂತ್ರ್ಯ ದಿನದ ಸಂಭ್ರಮದ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಿ ಮಾತನಾಡಿದರು.
2019ರ ಕೋವಿಡ್ ಸಂದರ್ಭದ ನಂತರದಲ್ಲಿ ಆರೋಗ್ಯ ಕ್ಷೇತ್ರ ಬಹು ಮುಖ್ಯ ಪಾತ್ರ ವಹಿಸುತ್ತಾ ಬಂದಿದೆ.ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆಗಳಿಗೂ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿ, ಜನರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುತ್ತಾ,, ಜನರ ಆರೋಗ್ಯದ ಕಡೆ ಅತ್ಯುತ್ತಮವಾಗಿ ಗಮನ ಹರಿಸುತ್ತಿರುವ ನಿಮ್ಮೆಲ್ಲರ ಸೇವೆ ಶ್ನಾಘನೀಯ ಎಂದರು.
ಈ ನಿಟ್ಟಿನಲ್ಲಿ ಕಳೆದ ಐದಾರು ವರ್ಷಗಳಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸದಸ್ಯರು,ಪಿಡಿಓ ಹಾಗೂ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
