*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ)ಆಲೂರು ತಾಲೂಕು ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿಗೊಂಡ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಆಲೂರು ವೆಂಕಟೇಶ್ವರ ಕಲ್ಯಾಣ ಮಂಟಪ ದಲ್ಲಿ ನಡೆಸಲಾಯಿತು.*
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಸನ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.*
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಪ್ರತಿಯೊಂದು ಕುಟುಂಬ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಅಭಿವೃದ್ಧಿ ಹೊಂದಬೇಕೆಂಬ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅತಿ ಕಡಿಮೆ ಬಡ್ಡಿದರದಲ್ಲಿ ಪ್ರಗತಿ ನಿಧಿ ಸಾಲ ಸೌಲಭ್ಯವನ್ನು ನೀಡಿ ಪ್ರತಿಯೊಬ್ಬರನ್ನು ಸ್ವಾವಲಂಬಿಯಾಗಿ ಬದುಕಲು ನೆರವನ್ನು ನೀಡಿದೆ. ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮವನ್ನು ಪೂಜ್ಯರು ಸಮಾಜಕ್ಕೆ ನೀಡಿದ್ದಾರೆ. ಬಡ ವಿದ್ಯಾರ್ಥಿ ಕೂಡ ವೃತ್ತಿಪರ ಶಿಕ್ಷಣವನ್ನು ಪಡಿಬೇಕು ಉನ್ನತ ಉದ್ಯೋಗವನ್ನು ಅಲಂಕರಿಸಬೇಕೆಂಬ ನಿಟ್ಟಿನಲ್ಲಿ ಪೂಜ್ಯರು ವೃತ್ತಿಪರ ಶಿಕ್ಷಣ ಪಡೆಯುವ ಸಂಗದ ಸದಸ್ಯರ ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ನೀಡುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬ ಮಕ್ಕಳು ಸಂಸ್ಕಾರಯುತವಾಗಿ ಬೆಳೆಯಬೇಕು ಎಂದು ಮಾಹಿತಿ ನೀಡಿದರು. ಆಲೂರು ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಶ್ರೀಯುತ ರವಿಕಿರಣ್ ಸರ್ ರವರು ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ ಪೂಜ್ಯರು ಇಂತಹ ಹಲವಾರು ಸಮಾಜಮುಖಿ ಕಾರ್ಯಕ್ರಮವನ್ನು ಮಾಡುತ್ತಿದ್ದು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಹಳ ಸಂತೋಷ ಆಗುತ್ತಿದೆ, ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಒಂದು ಕೌಶಲ್ಯವಿರುತ್ತದೆ ಆದ್ದರಿಂದ ಪ್ರತಿಯೊಬ್ಬ ಮಕ್ಕಳು ತನ್ನ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಮುನ್ನಡೆದು ತನ್ನ ಜೀವನವನ್ನು ಸಾರ್ಥಕತೆ ಮಾಡುವುದರ ಮೂಲಕ ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕೆಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಆಲೂರು ತಾಲೂಕಿನ ಮಾನ್ಯ ಯೋಜನಾಧಿಕಾರಿಯಾದ ಶ್ರೀ ರತ್ನಾಕರ ಕೊಠಾರಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ಮಲ್ಲಿಕಾರ್ಜುನ್, ಮೋಹನ್, ಧರ್ಮರಾಜ್, ರಾಜಶೇಖರ್, ಬಾಲಕೃಷ್ಣ ಶೆಟ್ಟಿ, ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಿಘ್ನೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸರಸ್ವತಿ, ಆಂತರಿಕ ಲೆಕ್ಕ ಪರಿಶೋಧಕಿ ಶ್ವೇತಾ, ಕಚೇರಿ ಸಹಾಯ ಪ್ರಬಂಧಕ ಸುಶಾಂತ್, ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.

