ಸಕಲೇಶಪುರದ ಹಾನಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗನಿ ಗ್ರಾಮದಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದ್ದ ಹಾನುಬಾಳು ದೇವರುಂದ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗೆ 35 ಲಕ್ಷ ರೂ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಮಂಜೂರು ಆಗಿದೆ.
ಈ ನಿರ್ಮಾಣ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


