ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವ ಬಿಜೆಪಿ ಪಕ್ಷವು ಆಲೂರು ನಗರದ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಲೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಉಮಾ ರವಿಪ್ರಕಾಶ್ , ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜೊತೆಗಿದ್ದರು.



