ಸಕಲೇಶಪುರ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ ಸಿಮೆಂಟ್ ಮಂಜು ರವರು ಪಾಲ್ಗೊಂಡು ಅತಿಹೆಚ್ಚು ಮಳೆಯಿಂದಾಗಿ ಹಾನಿಯಾಗಿರುವ ಕಾಫಿ ಮತ್ತು ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಮತ್ತು ಶೀಘ್ರವಾಗಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಮಂಡಲ ಬಿಜೆಪಿ ಅಧ್ಯಕ್ಷರಾದ ಅಶ್ವತ್ ವಳಲಹಳ್ಳಿ, ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮಿತ್ ಶೆಟ್ಟಿ, ಸಕಲೇಶಪುರ ಮಂಡಲ ಬಿಜೆಪಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು

