.
ಆಲೂರು:ಮಲ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಿಹಳ್ಳಿ ಕೆಂಚಾಂಬ ದೇವಾಲಯದ ಮುಂಭಾಗದಲ್ಲಿ ರಾಜ್ಯ ಹೆದ್ದಾರಿ 112 ಬಾಳ್ಳುಪೇಟೆಯಿಂದ ಕೊಡ್ಲಿಪೇಟೆಗೆ ಹಾಗೂ ಸ್ಥಳೀಯವಾಗಿ ಹಲವಾರು ಹಳ್ಳಿಗಳಿಗೆ ಸಂಪರ್ಕಿಸುವ ರಸ್ತೆ ಹರಿಹಳ್ಳಿ ಟೆಂಪಲ್ ನಿಂದ ಕೆಂಚಮ್ಮನ ಹೊಸಕೋಟೆ ಪ್ಲಾಂಟರ್ಸ್ ಕ್ಲಬ್ ವರೆಗೆ 1 ಕೋಟಿ 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.
ಆದಷ್ಟು ಬೇಗ ಉತ್ತಮ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ತಾಲೂಕಿನಮಗ್ಗೆ ಪಂಚಾಯತಿ ವ್ಯಾಪ್ತಿಗೆ ಬರುವ ಹಳ್ಳಿಯೂರು ಗ್ರಾಮದಲ್ಲಿ 55 ಲಕ್ಷ ವೆಚ್ಚದಲ್ಲಿ ಹತ್ತಾರು ಹಳ್ಳಿಗೆ ಸಂಪರ್ಕಿಸುವ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಲ್ಲಾಪುರ ಗ್ರಾಮ ಮಾಜಿ ಅಧ್ಯಕ್ಷರಾದ ಕಾಳಿಂಗ. ಮುಖಂಡರುಗಳಾದ ಪೂವಯ್ಯ ರುದ್ರೇಶ್. ಚೇತನ ಶಶಿ. ಪಂಚಾಯಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

