ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ತಾಲ್ಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪೂರ್ವಭಾವಿ ಸಭೆ.:-
ಸಕಲೇಶಪುರ :- ಡಿಸೆಂಬರ್ 6ರಂದು ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ಇಂದು ಸಂಜೆ ಪಟ್ಟಣದ ರೈತಭವನ (ಎ.ಪಿ.ಎಂ.ಸಿ. ಆವರಣ)ದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದಂತ ಮುರಳಿ ಮೋಹನ್ ರವರು ಮಾತನಾಡಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ನಮ್ಮ ತಾಲ್ಲೂಕಿನಲ್ಲಿ ಸುಮಾರು 400ಕ್ಕೂ ಹೆಚ್ಚು 94cಹಕ್ಕುಪತ್ರಗಳ ವಿತರಣೆ ಮತ್ತು ಎಲ್ಲಾ ಇಲಾಖೆಗಳಲ್ಲಿಯೂ ವಿವಿಧ ಫಲಾನುಭವಿಗಳಿಗೆ ಹಲವಾರು ಅನುಕೂಲಗಳನ್ನು ಒಟ್ಟಿಗೆ ಒಂದೆಡೆ ಮಾಡುವ ಸಲುವಾಗಿ ಆಗಮಿಸುತ್ತಿರುವಂತಹ ಈ ಬಹುದೊಡ್ಡ ಕಾರ್ಯಕ್ರಮಕ್ಕೆ ನಮ್ಮ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬೈರಮುಡಿ ಚಂದ್ರಣ್ಣನವರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಮುಖ್ಯಮಂತ್ರಿಗಳ ಮತ್ತು ಉಪ ಮುಖ್ಯಮಂತ್ರಿಗಳ ಈ ಬಹುದೊಡ್ಡ ಕಾರ್ಯಕ್ರಮಕ್ಕೆ ನಮ್ಮ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವಿದ್ಯಾಶಂಕರ, ಭಾಸ್ಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಅನ್ನಪೂರ್ಣ,ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಗೂದ್ದು ಲೋಕೇಶ್ ಸೇರಿತೆ ಸಕಲೇಶಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಎಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

