ಕೆ.ಎಸ್.ಆರ್.ಟಿ.ಸಿ ನಿಗಮದಲ್ಲಿ ನೋಟಿಫಿಕೇಶನ್ ನಂತೆ ನೇಮಕಾತಿ ಮಾಡಿಕೊಳ್ಳುವುದರ ಬಗ್ಗೆ, ಕಡಿತಗೊಳಿಸಿರುವ 543 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ, 1200 ಚಾಲಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು
